Home » News » ಮುಂಡರಗಿಯ ಈ ಕಳ್ಳನಿಗೆ ಸ್ಲ್ಪೆಂಡರ್ ಬೈಕ್ ಗಳೇ ಟಾರ್ಗೆಟ್..! ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್‌ಗಳ ವಶ..

ಮುಂಡರಗಿಯ ಈ ಕಳ್ಳನಿಗೆ ಸ್ಲ್ಪೆಂಡರ್ ಬೈಕ್ ಗಳೇ ಟಾರ್ಗೆಟ್..! ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ – 7 ಬೈಕ್‌ಗಳ ವಶ..

by CityXPress
0 comments

ಗದಗ: ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿದ್ದು,‌ ಅಂತರ್ ಜಿಲ್ಲಾ ಮಟ್ಟದಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪಿಯನ್ನು ಬಂಧಿಸಿ, ಅವನಿಂದ ಏಳು ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 18-03-2026 ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗುನ್ನಾ ಸಂಖ್ಯೆ 50/2026, ಕಲಂ 303(2) ಬಿ.ಎನ್.ಎಸ್-2023 ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳುವಾಗಿದ್ದ ಬೈಕ್‌ಗಳ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದರು.

ಈ ಹಿನ್ನೆಲೆ, ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರೋಹನ್ ಜಗದೀಶ ಅವರ ನಿರ್ದೇಶನದಂತೆ ವಿಶೇಷ ತಂಡವನ್ನು ರಚಿಸಲಾಗಿತ್ತು. ನರಗುಂದ ಉಪವಿಭಾಗದ ಡಿ.ಎಸ್.ಪಿ ಶ್ರೀ ಪ್ರಭುಗೌಡ ಕಿರೇದಳ್ಳಿ ಅವರ ಮಾರ್ಗದರ್ಶನದಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ಗಳಾದ ಚನ್ನಯ್ಯ ದೇವೂರ, ಬಿ.ಎನ್. ಯಳವತ್ತಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು.

ಈ ವೇಳೆ ದಿನಾಂಕ 20-03-2026 ರಂದು ಆರೋಪಿತನಾದ ರವಿ (34), ತಂದೆ ಪರಶುರಾಮ ಕೂಕನೂರ, ಉದ್ಯೋಗ ಕಾರ್ ಡ್ರೈವರ್, ನಿವಾಸ ಮುಂಡರಗಿ ಪಟ್ಟಣದ ಗೋಂದಳೆ ಓಣಿ, 10ನೇ ವಾರ್ಡ್ ಇವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

banner

ಪೊಲೀಸರ ವಿಚಾರಣೆಯಲ್ಲಿ ಆರೋಪಿತನು ಮುಂಡರಗಿ, ಕೊಪ್ಪಳ ಹಾಗೂ ಗದಗ ನಗರ ಪ್ರದೇಶಗಳಲ್ಲಿ ಒಟ್ಟು ಏಳು ಮೋಟಾರ್ ಸೈಕಲ್‌ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆದರೆ‌ ಈತ ಕಳ್ಳತನ ಮಾಡಿರುವ ಎಲ್ಲಾ ಬೈಕಗಳೂ, ಹೀರೋ ಹೋಂಡಾ ಕಂಪನಿಯ ಸ್ಪ್ಲೆಂಡರ್ ಬೈಕ್ ಗಳೇ ಆಗಿರುವದು ಗಮನಾರ್ಹ.

ಆರೋಪಿಯಿಂದ ಸುಮಾರು 2 ಲಕ್ಷ 5 ಸಾವಿರ ರೂಪಾಯಿ ಮೌಲ್ಯದ ವಿವಿಧ ಕಂಪನಿಗಳ ಏಳು ಬೈಕ್‌ಗಳನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಪತ್ತೆಗೆ ಶ್ರಮಿಸಿದ ಮುಂಡರಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜೆ.ಎ ಬಚ್ಚೇರಿ, ಅಶೋಕ ಬೂದಿಹಾಳ, ಮಂಜುನಾಥ ಅಗಸಿಮನಿ, ಮಹೇಶ ಗೋಳಗೊಳಕಿ, ವಿನಾಯಕ ಬಾಲರೆಡ್ಡಿ, ನಾಗರಾಜ ಹರಪನಹಳ್ಳಿ, ಶರಣಪ್ಪ ಓಜನಹಳ್ಳಿ, ನಿಂಗಪ್ಪ ಪೂಜಾರ ಹಾಗೂ ಪರಶುರಾಮ ಧಾರವಾಡ ಅವರ ಕಾರ್ಯವನ್ನು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ, ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಈ ಕುರಿತು ತನಿಖೆ ಮುಂದುವರಿದಿದ್ದು, ಆರೋಪಿಯು ಇನ್ನಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯೂ ಪರಿಶೀಲಿಸಲಾಗುತ್ತಿದ್ದು,‌ಮುಂಡರಗಿ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆದರೆ‌ ಈತ ಕಳ್ಳತನ ಮಾಡಿರುವ ಎಲ್ಲಾ ಬೈಕಗಳೂ, ಹೀರೋ ಹೋಂಡಾ ಕಂಪನಿಯ ಸ್ಪೆಂಡರ್ ಬೈಕ್ ಗಳೇ ಆಗಿರುವದು ಗಮನಾರ್ಹ.

ಆರೋಪಿಯಿಂದ ಸುಮಾರು 2 ಲಕ್ಷ 5 ಸಾವಿರ ರೂಪಾಯಿ ಮೌಲ್ಯದ ವಿವಿಧ ಕಂಪನಿಗಳ ಏಳು ಬೈಕ್‌ಗಳನ್ನು ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಪತ್ತೆಗೆ ಶ್ರಮಿಸಿದ ಮುಂಡರಗಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಜೆ.ಎ ಬಚ್ಚೇರಿ, ಅಶೋಕ ಬೂದಿಹಾಳ, ಮಂಜುನಾಥ ಅಗಸಿಮನಿ, ಮಹೇಶ ಗೋಳಗೊಳಕಿ, ವಿನಾಯಕ ಬಾಲರೆಡ್ಡಿ, ನಾಗರಾಜ ಹರಪನಹಳ್ಳಿ, ಶರಣಪ್ಪ ಓಜನಹಳ್ಳಿ, ನಿಂಗಪ್ಪ ಪೂಜಾರ ಹಾಗೂ ಪರಶುರಾಮ ಧಾರವಾಡ ಅವರ ಕಾರ್ಯವನ್ನು ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ, ಸೂಕ್ತ ಬಹುಮಾನ ಘೋಷಿಸಿದ್ದಾರೆ.

ಈ ಕುರಿತು ತನಿಖೆ ಮುಂದುವರಿದಿದ್ದು, ಆರೋಪಿಯು ಇನ್ನಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಯೂ ಪರಿಶೀಲಿಸಲಾಗುತ್ತಿದ್ದು,‌ಮುಂಡರಗಿ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb