Home » News » ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು, ಗದಗ ಜಿಲ್ಲೆಯ ಹೊರವಲಯದಲ್ಲಿ ಘಟನೆ..!

ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಕುರಿಗಳ ಸಾವು, ಗದಗ ಜಿಲ್ಲೆಯ ಹೊರವಲಯದಲ್ಲಿ ಘಟನೆ..!

by CityXPress
0 comments

ಗದಗ: ಜಿಲ್ಲೆಯ ಹೊರವಲಯದಲ್ಲಿ ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಲಕ್ಷ್ಮವ್ವ ಕುರುಬರ ಅವರಿಗೆ ಸೇರಿದ ಕುರಿಗಳು ಮೇಯುತ್ತಾ ಜಮೀನಿಗೆ ಬಂದಿದ್ದ ಸಂದರ್ಭದಲ್ಲಿ, ಏಕಾಏಕಿ ಗುಡುಗು-ಮಿಂಚಿನೊಂದಿಗೆ ಸುರಿದ ಮಳೆಯ ವೇಳೆ ಸಿಡಿಲು ಬಡಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ ಕುರಿಗಳು ನೆಲಕ್ಕುರುಳಿ ಸಾವನ್ನಪ್ಪಿರುವ ದೃಶ್ಯ ಮನಕಲುಕುವಂತಿತ್ತು.

ಈ ಘಟನೆಯಿಂದ ಕುರಿಗಾಹಿ ಲಕ್ಷ್ಮವ್ವ ಕುರುಬರ ಅವರಿಗೆ ಭಾರೀ ನಷ್ಟ ಉಂಟಾಗಿದ್ದು, ಕುಟುಂಬದ ಆರ್ಥಿಕ ಸ್ಥಿತಿಗೆ ಹೊಡೆತ ಬಿದ್ದಿದೆ. ಕುರಿಗಳ ಸಾವಿನಿಂದ ಆತಂಕಕ್ಕೊಳಗಾದ ಕುರಿ ಮಾಲೀಕರು ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಾಹಿತಿ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.

banner

ಪ್ರಕೃತಿ ವಿಕೋಪದಿಂದ ಉಂಟಾದ ಈ ರೀತಿಯ ಘಟನೆಗಳು ಗ್ರಾಮೀಣ ಭಾಗದ ಜನರ ಬದುಕಿಗೆ ತೀವ್ರ ಹೊಡೆತ ನೀಡುತ್ತಿರುವುದು ಗಮನಾರ್ಹವಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb