Home » News » ಶಾಲಾ ವಾಹನ ಪಲ್ಟಿ: ಅರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!

ಶಾಲಾ ವಾಹನ ಪಲ್ಟಿ: ಅರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ..!

by CityXPress
0 comments

ಗದಗ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನ ಏಕಾಏಕಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಅರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರವಲಯದಲ್ಲಿ ಇಂದು ಸಂಜೆ (ಶನಿವಾರ) ನಡೆದಿದೆ.

ವರದಿ: ಮಹಲಿಂಗೇಶ ಹಿರೇಮಠ. ಗದಗ

ನರಗುಂದ ಹೊರವಲಯದ ಪುಟ್ಟರಾಜ ಗವಾಯಿಗಳ ಸರ್ಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ನರಗುಂದದ ರೋಟರ್ಯಾಕ್ಟ್ ಶಾಲೆಗೆ ಸೇರಿದ ವಾಹನ ಅಪಘಾತಕ್ಕೀಡಾಗಿದೆ. ಶಾಲಾ ವಾಹನವು ನರಗುಂದದಿಂದ ಭೈರನಹಟ್ಟಿ ಗ್ರಾಮದತ್ತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

banner

ಸ್ಟೇರಿಂಗ್ ರಾಡ್ ಕಟ್‌—ನಿಯಂತ್ರಣ ತಪ್ಪಿದ ವಾಹನ

ವಾಹನ ಚಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಸ್ಟೇರಿಂಗ್ ರಾಡ್ ಕಟ್ ಆಗಿದೆ ಎನ್ನಲಾಗಿದ್ದು, ಇದರಿಂದ ಚಾಲಕನ ನಿಯಂತ್ರಣ ತಪ್ಪಿದ ವಾಹನ ಮೊದಲು ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ವಿದ್ಯಾರ್ಥಿಗಳ ತಲೆ, ಕೈ ಹಾಗೂ ಕಾಲುಗಳಿಗೆ ತೀವ್ರವಾಗಿ ಗಾಯಗಳಾಗಿವೆ. ಅಪಘಾತದ ಬಳಿಕ ಕೆಲಕಾಲ ವಿದ್ಯಾರ್ಥಿಗಳು ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ದೃಶ್ಯ ಕಂಡುಬಂದಿದೆ.

ಸ್ಥಳೀಯರಿಂದ ತಕ್ಷಣ ರಕ್ಷಣಾ ಕಾರ್ಯಾಚರಣೆ

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ, ವಾಹನದಲ್ಲಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣ ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳ ಸ್ಥಿತಿ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಉಳಿದ ಗಾಯಾಳು ವಿದ್ಯಾರ್ಥಿಗಳಿಗೆ ನರಗುಂದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ವಾಹನದಲ್ಲಿದ್ದ ಇನ್ನೂ ಹಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ತಪ್ಪಿದ ಭಾರೀ ಅನಾಹುತ

ಅಪಘಾತದ ವೇಳೆ ವಾಹನದಲ್ಲಿದ್ದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಅಪಘಾತದ ತೀವ್ರತೆಯನ್ನು ಗಮನಿಸಿದರೆ, ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಶಾಲಾ ಮಕ್ಕಳನ್ನು ಸಾಗಿಸುವ ವಾಹನವೇ ಅಪಘಾತಕ್ಕೀಡಾಗಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

ಸ್ಥಳಕ್ಕೆ ಪೊಲೀಸರ ಭೇಟಿ

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ನರಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಶಾಲಾ ವಾಹನವನ್ನು ಪರಿಶೀಲಿಸಿದ ಪೊಲೀಸರು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ವಾಹನದ ಸ್ಟೇರಿಂಗ್ ರಾಡ್ ಕಟ್ ಆಗಿರುವುದೇ ಅಪಘಾತಕ್ಕೆ ಕಾರಣವೇ ಅಥವಾ ವಾಹನದ ನಿರ್ವಹಣೆಯಲ್ಲಿ ಲೋಪವಾಗಿದೆಯೇ ಎಂಬುದನ್ನು ತನಿಖೆಯಿಂದ ತಿಳಿದುಬರಬೇಕಿದೆ.

ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಆತಂಕ

ಈ ಘಟನೆ ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ಸುರಕ್ಷತೆಯ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಶಾಲಾ ವಾಹನಗಳ ಫಿಟ್‌ನೆಸ್, ನಿಯಮಿತ ನಿರ್ವಹಣೆ, ಚಾಲಕರ ಸುರಕ್ಷತಾ ಜ್ಞಾನ ಹಾಗೂ ವಾಹನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆಯೇ ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕಿದೆ.

ವಿಶೇಷವಾಗಿ ಶಾಲಾ ಮಕ್ಕಳನ್ನು ಪ್ರತಿದಿನ ಸಾಗಿಸುವ ವಾಹನಗಳ ಯಾಂತ್ರಿಕ ಸ್ಥಿತಿ, ಬ್ರೇಕ್, ಸ್ಟೇರಿಂಗ್ ವ್ಯವಸ್ಥೆ, ಟೈರ್‌ಗಳು ಸೇರಿದಂತೆ ಪ್ರಮುಖ ಭಾಗಗಳನ್ನು ನಿಯಮಿತವಾಗಿ ತಪಾಸಣೆ ಮಾಡುವ ಅಗತ್ಯವಿದೆ ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

ಘಟನೆ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb