Home » News » ಲಕ್ಷ್ಮೇಶ್ವರ–ಶಿಗ್ಲಿ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಹಿಂಬದಿ ಸವಾರನಿಗೆ ಗಂಭೀರ ಗಾಯ..!

ಲಕ್ಷ್ಮೇಶ್ವರ–ಶಿಗ್ಲಿ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಹಿಂಬದಿ ಸವಾರನಿಗೆ ಗಂಭೀರ ಗಾಯ..!

by CityXPress
0 comments

ಗದಗ/ಲಕ್ಷ್ಮೇಶ್ವರ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನ ಕಾಲು ತುಂಡಾಗಿ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ–ಶಿಗ್ಲಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಅಪಘಾತದಲ್ಲಿ ಶಂಕರಪ್ಪ ಅಣ್ಣಿಗೇರಿ (50) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಬೈಕ್‌ನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಸದಾಶಿವ ರೊಳ್ಳಿ ಅವರ ಕಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಶಂಕರಪ್ಪ ಅಣ್ಣಿಗೇರಿ ಅವರು ಶಿಗ್ಲಿಯಿಂದ ಲಕ್ಷ್ಮೇಶ್ವರದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಲಕ್ಷ್ಮೇಶ್ವರದಿಂದ ಶಿಗ್ಲಿ ಕಡೆಗೆ ಆಟೋ ಬರುತ್ತಿತ್ತು. ಈ ವೇಳೆ ಲಕ್ಷ್ಮೇಶ್ವರ–ಶಿಗ್ಲಿ ರಸ್ತೆಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶಂಕರಪ್ಪ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಬೈಕ್‌ನ ಹಿಂಬದಿ ಸವಾರ ಸದಾಶಿವ ರೊಳ್ಳಿ ಅವರ ಕಾಲು ತುಂಡಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಸದ್ಯ ಸದಾಶಿವ ರೊಳ್ಳಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

banner

ತಡರಾತ್ರಿ ಸಂಭವಿಸಿದ ಈ ಅಪಘಾತದಿಂದಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ. ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿವೆ.

ಈ ಘಟನೆ ಲಕ್ಷ್ಮೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb