Home » News » ನ.28ರಂದು ಮುಂಡರಗಿಯಲ್ಲಿ ಜಗದ್ಗುರು ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದ ಯಶಸ್ಸಿಗೆ ಪೂರ್ವಭಾವಿ ಸಭೆ ಆಯೋಜನೆ – ನ.23(ನಾಳೆ) ರಂದು ಸದ್ಭಕ್ತರು, ಸಮಿತಿಗಳ ಸದಸ್ಯರ ಸಭೆ

ನ.28ರಂದು ಮುಂಡರಗಿಯಲ್ಲಿ ಜಗದ್ಗುರು ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದ ಯಶಸ್ಸಿಗೆ ಪೂರ್ವಭಾವಿ ಸಭೆ ಆಯೋಜನೆ – ನ.23(ನಾಳೆ) ರಂದು ಸದ್ಭಕ್ತರು, ಸಮಿತಿಗಳ ಸದಸ್ಯರ ಸಭೆ

by CityXPress
0 comments

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀ ಮ.ನಿ.ಪ್ರ. ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳಿಗೆ ನವೆಂಬರ್ 28ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ಗದಗ ಜಿಲ್ಲಾಡಳಿತ ನಿರ್ಧರಿಸಿದೆ.

ವರದಿ: ಮಹಲಿಂಗೇಶ ಹಿರೇಮಠ. ಗದಗ

ಮುಂಡರಗಿ ಪಟ್ಟಣದ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನವೆಂಬರ್ 28 ರಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ರಾಜ್ಯ ಸರ್ಕಾರದ ವತಿಯಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರಡ್ಡಿ ಅವರು ಪಾಲ್ಗೊಂಡು ಪೂಜ್ಯ ಶ್ರೀಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ.

ಪೂಜ್ಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶಿವಯೋಗಿಗಳು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಡರಗಿ ಪಟ್ಟಣದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶೇಷವಾಗಿ ಹಾಗೂ ವಿಜೃಂಭಣೆಯಿಂದ ನಡೆಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.

banner

ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಶ್ರೀಮಠದ ವತಿಯಿಂದ ಪೂರ್ವಭಾವಿ ಸಭೆಯನ್ನು ನವೆಂಬರ್ 23 ರಂದು (ನಾಳೆ) ಬೆಳಗ್ಗೆ 11 ಗಂಟೆಗೆ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡದಲ್ಲಿ ಆಯೋಜಿಸಲಾಗಿದೆ.

ಸಭೆಗೆ ಮುಂಡರಗಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು, ಶ್ರೀಮಠದ ವಿದ್ಯಾ ಸಮಿತಿ, ಜಾತ್ರಾ ಸಮಿತಿ, ಪ್ರವಚನ ಸಮಿತಿ, ಅಕ್ಕನ ಬಳಗದ ಸದಸ್ಯರು ಹಾಗೂ ಸರ್ವಧರ್ಮಗಳ ಮುಖಂಡರನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ರೂಪುರೇಷೆ, ಸಿದ್ಧತೆಗಳು ಹಾಗೂ ಕಾರ್ಯಕ್ರಮದ ಯಶಸ್ವಿ ಆಯೋಜನೆ ಕುರಿತು ಸಭೆಯಲ್ಲಿ ಚರ್ಚಿಸಿ, ಸಾರ್ವಜನಿಕರಿಂದ ಸಲಹೆ ಮತ್ತು ಸೂಚನೆಗಳನ್ನು ಪಡೆಯಲಾಗುವುದು.

ಆದ್ದರಿಂದ ಎಲ್ಲ ಸದ್ಭಕ್ತರು ಹಾಗೂ ವಿವಿಧ ಸಮಿತಿಗಳ ಸದಸ್ಯರು ಪೂರ್ವಭಾವಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡುವ ಮೂಲಕ ರಾಜ್ಯಮಟ್ಟದ ಈ ಮಹತ್ವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಶ್ರೀಮಠದ ಪ್ರಕಟಣೆ ಮೂಲಕ ವಿನಂತಿಸಲಾಗಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb