Home » News » ಆದ್ರಳ್ಳಿ ಗ್ರಾಮದ ಕರಾಟೆ ಪ್ರತಿಭೆ ಯೋಗೇಶ ಲಮಾಣಿ ರಾಜ್ಯಮಟ್ಟದಲ್ಲಿ ಸಾಧನೆ – ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಆದ್ರಳ್ಳಿ ಗ್ರಾಮದ ಕರಾಟೆ ಪ್ರತಿಭೆ ಯೋಗೇಶ ಲಮಾಣಿ ರಾಜ್ಯಮಟ್ಟದಲ್ಲಿ ಸಾಧನೆ – ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

by CityXPress
0 comments

ಲಕ್ಷ್ಮೇಶ್ವರ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದ್ರಳ್ಳಿ ಗ್ರಾಮದ ವಿದ್ಯಾರ್ಥಿ ಯೋಗೇಶ್ ಲಮಾಣಿ ಅವರು ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.

ವರದಿ : ಪರಮೇಶ ಎಸ್ ಲಮಾಣಿ

ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಬಾಲಕರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಯೋಗೇಶ್ ಲಮಾಣಿ ಅವರು, ಬೆಂಗಳೂರು ವಲಯದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನವೆಂಬರ್ 22ರಂದು ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿವಿಧ ಶಾಲೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ ಯೋಗೇಶ್ ತಮ್ಮ ಕರಾಟೆ ಕೌಶಲ್ಯ, ಸಮಯಪ್ರಜ್ಞೆ ಹಾಗೂ ಆತ್ಮವಿಶ್ವಾಸದ ಪ್ರದರ್ಶನದ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆದ್ರಳ್ಳಿ ಗ್ರಾಮದ ಲಕ್ಷ್ಮಣ ಕೃಷ್ಣಪ್ಪ ಲಮಾಣಿ ಹಾಗೂ ನೀಲವ್ವ ಲಕ್ಷ್ಮಣ ಲಮಾಣಿ ದಂಪತಿಯ ಪುತ್ರನಾದ ಯೋಗೇಶ್ ಅವರ ಈ ಸಾಧನೆಗೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

banner

ಯೋಗೇಶ್ ಅವರ ಸಾಧನೆಗೆ ಅವರ ಮಾವಂದಿರಾದ ವಿಠಲ ದಾನಪ್ಪ ಲಮಾಣಿ ಹಾಗೂ ಕೃಷ್ಣ ದಾನಪ್ಪ ಲಮಾಣಿ ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಗ್ರಾಮೀಣ ಪ್ರತಿಭೆಗಳು ಸೂಕ್ತ ಮಾರ್ಗದರ್ಶನ, ನಿರಂತರ ಅಭ್ಯಾಸ ಹಾಗೂ ಪರಿಶ್ರಮದ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಲ್ಲರು ಎಂಬುದಕ್ಕೆ ಯೋಗೇಶ್ ಅವರ ಸಾಧನೆ ಸಾಕ್ಷಿಯಾಗಿದೆ. ಮುಂಬರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ದೇಶದ ಮಟ್ಟದಲ್ಲಿ ಗ್ರಾಮದ ಕೀರ್ತಿ ಹೆಚ್ಚಿಸಲಿ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb