Home » News » ಬಿಪಿನ್–ವಿನಯ ಚಿಕ್ಕಟ್ಟಿ ಹಾಗೂ ಬಿ.ಜಿ. ಹುಬ್ಬಳ್ಳಿ ಪಿಯು ಕಾಲೇಜುಗಳಲ್ಲಿ ಪ್ರವೇಶ ಪ್ರಾರಂಭ: NEET–JEE ತರಬೇತಿಯೊಂದಿಗೆ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ..

ಬಿಪಿನ್–ವಿನಯ ಚಿಕ್ಕಟ್ಟಿ ಹಾಗೂ ಬಿ.ಜಿ. ಹುಬ್ಬಳ್ಳಿ ಪಿಯು ಕಾಲೇಜುಗಳಲ್ಲಿ ಪ್ರವೇಶ ಪ್ರಾರಂಭ: NEET–JEE ತರಬೇತಿಯೊಂದಿಗೆ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ..

by CityXPress
0 comments

ಗದಗ, ಏ.18:
ಗದಗ ನಗರದ ಪ್ರಮುಖ ವಿದ್ಯಾಸಂಸ್ಥೆಗಳಾದ ಬಿಪಿನ್ ಚಿಕ್ಕಟ್ಟಿ ಪಿಯು ಸೈನ್ಸ್ ಕಾಲೇಜು, ವಿನಯ ಚಿಕ್ಕಟ್ಟಿ ಪಿಯು ಸೈನ್ಸ್ ಮತ್ತು ಕಾಮರ್ಸ್ ಕಾಲೇಜು ಹಾಗೂ ಬಿ.ಜಿ. ಹುಬ್ಬಳ್ಳಿ ಪಿಯು ಸೈನ್ಸ್ ಮತ್ತು ಕಾಮರ್ಸ್ ಕಾಲೇಜುಗಳಲ್ಲಿ 2026-27ನೇ ಸಾಲಿನ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.

ಈ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಪ್ರವೇಶ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಮಗ್ರ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗಿದೆ.

ವಿಜ್ಞಾನ ವಿಭಾಗದಲ್ಲಿ ಪಿಸಿಎಂ ಬಿ (PCMB) ಕೋರ್ಸ್‌ಗಳು ಲಭ್ಯವಿದ್ದು, ವಾಣಿಜ್ಯ ವಿಭಾಗದಲ್ಲಿ ಸಿಎಸ್‌ (CS) ಹಾಗೂ ಇಬಿಎಸಿ (EBAC) ಸಂಯೋಜನೆಗಳಿವೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನೀಟ್, ಜೆಇಇ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗಳಿಗೆ ವಿಶೇಷ ತರಬೇತಿ ನೀಡಲಾಗುತ್ತದೆ.

ಇದೇ ವೇಳೆ, ಇಬಿಎಸಿ ವಿದ್ಯಾರ್ಥಿಗಳಿಗೆ ಸಿಎ ಹಾಗೂ ಸಿಪಿಟಿ ಪರೀಕ್ಷೆಗಳಿಗೂ ಸಮಗ್ರ ಮಾರ್ಗದರ್ಶನ ಒದಗಿಸಲಾಗುತ್ತದೆ.
ವಿದ್ಯಾರ್ಥಿಗಳ ಸೌಲಭ್ಯಕ್ಕಾಗಿ ಬಾಲಕರ ಮತ್ತು ಬಾಲಕಿಯರಿಗಾಗಿ ವಸತಿ ಸೌಲಭ್ಯ (ಹಾಸ್ಟೆಲ್) ವ್ಯವಸ್ಥೆಯೂ ಕಲ್ಪಿಸಲಾಗಿದೆ. ಉತ್ತಮ ಮೂಲಸೌಕರ್ಯ, ಅನುಭವೀ ಉಪನ್ಯಾಸಕರು ಹಾಗೂ ಶೈಕ್ಷಣಿಕ ವಾತಾವರಣದಿಂದ ಈ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿವೆ.

banner

ಗದಗ ನಗರದಲ್ಲಿರುವ ವಿವಿಧ ಪ್ರದೇಶಗಳಲ್ಲಿ ಈ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಮುಂಡರಗಿ ರಸ್ತೆ, ಕೆ.ಸಿ. ರಾಣಿ ರಸ್ತೆ ಮತ್ತು ಕಳಸಾಪುರ ರಸ್ತೆಯಲ್ಲಿರುವ ಕ್ಯಾಂಪಸ್‌ಗಳಲ್ಲಿ ತರಗತಿಗಳು ನಡೆಯುತ್ತವೆ. ವಿದ್ಯಾರ್ಥಿಗಳಿಗೆ ಸಂಚಾರದ ಅನುಕೂಲಕ್ಕಾಗಿ ಬಸ್ ವ್ಯವಸ್ಥೆಯೂ ಕಲ್ಪಿಸಲಾಗಿದೆ.

ಪ್ರವೇಶಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪ್ರಕಟಿಸಿರುವ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ಸಂಸ್ಥೆಯ ಆಡಳಿತ ಮಂಡಳಿ ತಿಳಿಸಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb