ಗದಗ: ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ನಡೆಯುವ ಪೂರ್ವ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗಾಗಿ ಪ್ರಶಸ್ತಿ ಪ್ರಧಾನ ಸಮಾರಂಭವು ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ವೀಣಾ ಎ. ಪೋತ್ನಿಸ್, ಅಧ್ಯಕ್ಷರು, ಸೌಭಾಗ್ಯ ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್ ನಿಯಮಿತ, ಗದಗ ಅವರು ಮಾತನಾಡುತ್ತಾ, ಪೂರ್ವ ಪ್ರಾಥಮಿಕ ಹಂತವು ಮಕ್ಕಳ ಜೀವನದ ಬುನಾದಿಯಾಗಿದ್ದು, ಈ ಹಂತದಲ್ಲಿ ಕಲಿಯುವ ಸಣ್ಣ ವಿಷಯಗಳೇ ಭವಿಷ್ಯದ ದೊಡ್ಡ ಸಾಧನೆಗೆ ದಾರಿಯಾಗುತ್ತವೆ ಎಂದರು. “ಬೆಳೆಯುವ ಸಿರಿ ಮೊಳಕೆಯಲ್ಲಿಯೇ ನೋಡು” ಎಂಬ ನುಡಿಯಂತೆ ಈ ವಯಸ್ಸಿನಲ್ಲಿ ಮಕ್ಕಳು ಆತ್ಮವಿಶ್ವಾಸ, ಶಿಸ್ತು, ಸೃಜನಶೀಲತೆ ಹಾಗೂ ಸ್ನೇಹಭಾವವನ್ನು ಬೆಳೆಸಿಕೊಳ್ಳುತ್ತಾರೆ ಎಂದು ತಿಳಿಸಿದರು. ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಸಮಾನವಾಗಿದ್ದು, ಮಕ್ಕಳು ನಮ್ಮ ನಿಜವಾದ ಸಂಪತ್ತಾಗಿದ್ದಾರೆ ಎಂದರು. ಇಂದಿನ ಪ್ರಶಸ್ತಿಗಳು ಮಕ್ಕಳ ಪರಿಶ್ರಮ ಮತ್ತು ಶಿಕ್ಷಕರ ಮಾರ್ಗದರ್ಶನಕ್ಕೆ ನೀಡುವ ಗೌರವದ ಸಂಕೇತವಾಗಿವೆ ಎಂದು ಹೇಳಿದರು.
ಇನ್ನೋರ್ವ ಮುಖ್ಯ ಅತಿಥಿಗಳಾದ ಶ್ರೀಮತಿ ಸಂದ್ಯಾ ಎಂ. ಪೋತ್ನಿಸ್, ಮಾಜಿ ಅಧ್ಯಕ್ಷರು, ಮಿಡ್‌ಟೌನ್ ಇನ್ನರ್‌ವೀಲ್ ಕ್ಲಬ್, ಗದಗ ಅವರು ಮಾತನಾಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರುವುದು ಗೌರವದ ವಿಷಯ ಎಂದರು. ಮಕ್ಕಳ ಕಲಿಕೆಗೆ ಉತ್ತಮ ವಾತಾವರಣವಿದ್ದು, ಅವರು ಕಲಿಯುವ ಪ್ರತಿಯೊಂದು ಪಾಠವು ಅವರ ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ತಿಳಿಸಿದರು. ಪ್ರಶಸ್ತಿ ಪಡೆದ ಮಕ್ಕಳಿಗೆ ಅಭಿನಂದನೆ ಸಲ್ಲಿಸಿ, ಪ್ರಶಸ್ತಿ ಪಡೆಯದ ಮಕ್ಕಳು ನಿರಾಶರಾಗದೆ ತಮ್ಮ ಪ್ರಯತ್ನವನ್ನು ಮುಂದುವರಿಸಬೇಕು ಎಂದು ಪ್ರೋತ್ಸಾಹಿಸಿದರು. ಪೋಷಕರು ಮಕ್ಕಳ ಶಿಕ್ಷಣದಲ್ಲಿ ಪ್ರಮುಖ ಪಾತ್ರವಹಿಸುತ್ತಾರೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷರಾದ ಪ್ರೊ. ಎಸ್.ವಾಯ್. ಚಿಕ್ಕಟ್ಟಿ ಅವರು ಮಾತನಾಡಿ, ಚಿಕ್ಕ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಉತ್ತೇಜನ ನೀಡುವುದು ನಮ್ಮ ಜವಾಬ್ದಾರಿ ಎಂದರು. ಮಕ್ಕಳು ಭವಿಷ್ಯದ ನಾಗರಿಕರಾಗಿದ್ದು, ಅವರ ಶಿಕ್ಷಣದ ಮೊದಲ ಹಂತ ಪೂರ್ವ ಪ್ರಾಥಮಿಕ ಶಾಲೆಯಾಗಿದೆ ಎಂದು ಹೇಳಿದರು. ಈ ಹಂತದಲ್ಲಿ ನೀಡುವ ಪ್ರೋತ್ಸಾಹ, ಪ್ರೀತಿ ಮತ್ತು ಮಾರ್ಗದರ್ಶನವು ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದರು. ಪ್ರತಿಯೊಬ್ಬ ಮಗುವಿನಲ್ಲೂ ವಿಭಿನ್ನ ಪ್ರತಿಭೆ ಇರುತ್ತದೆ; ಪಾಠ, ಕ್ರೀಡೆ, ಕಲೆಗಳಲ್ಲಿ ಮುನ್ನಡೆಯುವ ಎಲ್ಲ ಮಕ್ಕಳಿಗೂ ಸಮಾನ ಮೌಲ್ಯ ನೀಡುವುದು ಸಂಸ್ಥೆಯ ಉದ್ದೇಶವಾಗಿದೆ ಎಂದು ಹೇಳಿದರು. ಶಿಕ್ಷಕಿಯರ ಪರಿಶ್ರಮ ಹಾಗೂ ಪಾಲಕರ ಸಹಕಾರದಿಂದಲೇ ಈ ಸಾಧನೆ ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶ್ರೀಮತಿ ವೀಣಾ ಎ. ಪೋತ್ನಿಸ್ ಹಾಗೂ ಶ್ರೀಮತಿ ಸಂದ್ಯಾ ಎಂ. ಪೋತ್ನಿಸ್ ಅವರನ್ನು ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿದರು.
ಕಾರ್ಯಕ್ರಮದಲ್ಲಿ ವಿನಯ್ ಚಿಕ್ಕಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ವಿನಯ್ ಎಸ್. ಚಿಕ್ಕಟ್ಟಿ, ವಿನಯ್ ಚಿಕ್ಕಟ್ಟಿ ಐಸಿಎಸ್ಇ ಶಾಲೆಯ ಉಪಪ್ರಾಚಾರ್ಯರಾದ ಶ್ರೀಮತಿ ಶೋಭಾ ಎಸ್. ಸ್ಥಾವರಮಠ, ಬಿಪಿನ್ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಿಯಾನಾ ಮುಲ್ಲಾ, ವಾಯ್.ಎನ್. ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶೋಭಾ ಜೆ. ಭಟ್, ವಿನಯ್ ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶ್ರೀಮತಿ ಪುಷ್ಪಲತಾ ಎಂ. ಬೆಲೇರಿ, ಎಸ್.ವಾಯ್. ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶ್ರೀಮತಿ ಕೌಸರಬಾನು ಎಸ್. ಮಜ್ಜಗಿ ಹಾಗೂ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಂ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯರಾದ ಶ್ರೀಮತಿ ಅಕ್ಷತಾ ಎಸ್. ಖೋಡೆ ಉಪಸ್ಥಿತರಿದ್ದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಪಾಲಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿನಯ್ ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಅನ್ವಿತಾ ಮಹೇಂದ್ರಕರ್, ಅದ್ವಿಕಾ ಮನಾಪಟ್ಟಿ, ಆಯುಷ್ ಪಿ. ರಕ್ಕಸಗಿ ಹಾಗೂ ಪಾಲಕರಾದ ಡಾ. ಪ್ರಕಾಶ ರಕ್ಕಸಗಿ, ವಾಯ್.ಎನ್. ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಕಾಯರಾ ಜೈನ್, ಮಾಹಿರಾ ಪಾರೇಕ್ ಹಾಗೂ ಪಾಲಕರಾದ ಸತ್ಯದೇವ ರಾಮಚಂದ್ರುಣಿ, ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಂ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಅಂಜನಾದ್ರಿ ವಸ್ತದ, ಸಾಚಿ ಕೊಠಾರಿ ಹಾಗೂ ಪಾಲಕರಾದ ಶ್ರೀಮತಿ ಕವಿತಾ ರಾಯ್ಕರ್ ಮತ್ತು ಶ್ರೀಮತಿ ಶಿಲ್ಪಾ ಕಿತ್ತಲಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮವು ವಿನಯ್ ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡಿತು. ಎಸ್.ವಾಯ್. ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ಸ್ವಾಗತ ನೃತ್ಯ ಪ್ರದರ್ಶಿಸಿದರು. ಶಿಕ್ಷಕಿ ಕುಮಾರಿ ರೆಜಿನಾ ನೂತಕ್ಕಿ ಸ್ವಾಗತಿಸಿದರು. ವೇದಿಕೆಯಲ್ಲಿದ್ದ ಅತಿಥಿಗಳು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪದವಿ ಪ್ರಧಾನ ನೃತ್ಯವನ್ನು ಎಸ್.ವಾಯ್. ಚಿಕ್ಕಟ್ಟಿ ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು ನಿರ್ವಹಿಸಿದರು.
ಅತಿಥಿಗಳ ಪರಿಚಯವನ್ನು ವಿನಯ್ ಚಿಕ್ಕಟ್ಟಿ ಐಸಿಎಸ್ಇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಸಾಚಿ ಜೈನ್ ಹಾಗೂ ಆಮ್ನಾ ಸಾಲಾರ್ ನೆರವೇರಿಸಿದರು. ಶಿಕ್ಷಕಿ ಕುಮಾರಿ ಶ್ರೇಯಾ ಡೊಳ್ಳಿನ ಪದವಿ ಪ್ರಧಾನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ನಡೆಸಿದರು. ಶಿಕ್ಷಕಿ ಶ್ರೀಮತಿ ಅಕ್ಷತಾ ಖೋಡೆ ವಾರ್ಷಿಕ ಕ್ರೀಡಾಕೂಟ ಪ್ರಶಸ್ತಿ ವಿತರಣೆಯನ್ನು ನಿರ್ವಹಿಸಿದರು. ಶಿಕ್ಷಕಿ ಸುಮನ್ ಆರ್. ಚಂದ್ರ ಹಾಗೂ ಶಾಹಿನ್ ಬೆಪಾರಿ ಉತ್ತಮ ವಿದ್ಯಾರ್ಥಿಗಳ ಪ್ರಶಸ್ತಿ ವಿತರಣೆಯನ್ನು ನಡೆಸಿಕೊಟ್ಟರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಕಾಲಾಲ್ ವಂದನಾರ್ಪಣೆ ಸಲ್ಲಿಸಿದರು.
ಒಟ್ಟಿನಲ್ಲಿ, ಈ ಪ್ರಶಸ್ತಿ ಪ್ರಧಾನ ಸಮಾರಂಭವು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಿ ಯಶಸ್ವಿಯಾಗಿ ನೆರವೇರಿತು.
