ಸುದ್ದಿ:
ಗದಗ, ಏಪ್ರಿಲ್ 17: ಶ್ರೀ ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠ, ಶೃಂಗೇರಿ ಹಾಗೂ ಬಾಲಭಾರತೀ ಶೃಂಗೇರಿ ವತಿಯಿಂದ “ಸಂಸ್ಕಾರ ಸುಧಾ” ಎಂಬ 14 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ನಗರದಲ್ಲಿ ಆಯೋಜಿಸಲಾಗಿದೆ.
ಈ ಶಿಬಿರವು ಏಪ್ರಿಲ್ 20ರಿಂದ ಮೇ 3ರವರೆಗೆ ಪ್ರತಿದಿನ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.30ರವರೆಗೆ ನಗರದ ನಗರೇಶ್ವರ ದೇವಸ್ಥಾನ ಆವರಣದಲ್ಲಿರುವ ವಾಸವಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆ (ನರಿಭಾವಿ ಓಣಿ, ವಿ.ಎನ್.ಟಿ. ರಸ್ತೆ)ಯಲ್ಲಿ ನಡೆಯಲಿದೆ. 10ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಈ ಉಚಿತ ಶಿಬಿರವನ್ನು ಏರ್ಪಡಿಸಲಾಗಿದೆ.

ಮಕ್ಕಳಲ್ಲಿ ಆಧುನಿಕತೆಯ ಜೊತೆಗೆ ಧಾರ್ಮಿಕ ಮೌಲ್ಯಗಳು, ನೈತಿಕತೆ ಹಾಗೂ ಉತ್ತಮ ಸಂಸ್ಕಾರಗಳನ್ನು ಬೆಳೆಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಇಂದಿನ ವೇಗದ ಜೀವನಶೈಲಿಯಲ್ಲಿ ಮಕ್ಕಳಿಗೆ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ಈ ದಿಸೆಯಲ್ಲಿ ಶೃಂಗೇರಿ ಶಾರದಾ ಪೀಠವು ಮಹತ್ವದ ಹೆಜ್ಜೆ ಇಟ್ಟಿದೆ.
ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ನಮ್ಮ ಪರಂಪರೆ, ಸಂಸ್ಕೃತಿ, ಧಾರ್ಮಿಕ ಮೌಲ್ಯಗಳ ಪರಿಚಯ, ಹಾಗೂ ಸರಳ ನಿತ್ಯಪೂಜೆಯ ತರಬೇತಿಯನ್ನು ನೀಡಲಾಗುತ್ತದೆ. ಶಿಬಿರದ ಕೊನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಶಿಬಿರ ಕಿಟ್ಗಳನ್ನು ವಿತರಿಸಲಾಗುವುದು.
ಆಸಕ್ತ ಪೋಷಕರು ತಮ್ಮ ಮಕ್ಕಳ ಹೆಸರನ್ನು ಶಿಬಿರ ಆರಂಭವಾಗುವ ಮೊದಲುಲೇ ನೋಂದಾಯಿಸಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಚಾಲಕರಾದ ಡಾ. ಗಣೇಶ ಸುಲ್ತಾನಪುರ (ಮೊ: 9902066252) ಹಾಗೂ ಸಹ ಸಂಚಾಲಕರಾದ ಸತೀಶ ಕುಂಬಾರ (ಮೊ: 8050903407) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

