Home » News » ಚಿಕ್ಕವಡ್ಡಟ್ಟಿ ಘಟನೆ ಬಳಿಕ ಸಂತ್ರಸ್ತರಿಗೆ ಆಹಾರ ಕಿಟ್ ನೀಡಿದ ಸಮಾಜ ಕಲ್ಯಾಣ ಇಲಾಖೆ: ಸೌಹಾರ್ದತೆಯ ಸಂದೇಶದೊಂದಿಗೆ ಸಂತ್ರಸ್ತರಿಗೆ ಸಹಾಯ ಹಸ್ತ..

ಚಿಕ್ಕವಡ್ಡಟ್ಟಿ ಘಟನೆ ಬಳಿಕ ಸಂತ್ರಸ್ತರಿಗೆ ಆಹಾರ ಕಿಟ್ ನೀಡಿದ ಸಮಾಜ ಕಲ್ಯಾಣ ಇಲಾಖೆ: ಸೌಹಾರ್ದತೆಯ ಸಂದೇಶದೊಂದಿಗೆ ಸಂತ್ರಸ್ತರಿಗೆ ಸಹಾಯ ಹಸ್ತ..

by CityXPress
0 comments

ಗದಗ:
ತಾಲ್ಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಕಳೆದ ಮಾರ್ಚ್ 23 ರಂದು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ನಡುವೆ ನಡೆದ ಅಹಿತಕರ ಘಟನೆಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಬರಟ್ಟಿ ಚಾಲನೆ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಕಿಟ್‌ಗಳನ್ನು ಹಸ್ತಾಂತರಿಸಿದರು.

ಗ್ರಾಮದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೈಗೊಂಡ ತೀರ್ಮಾನದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ನಿರ್ದೇಶಕಿ ನಂದಾ ಹಣಬರಟ್ಟಿ ಅವರು, “ಸಮುದಾಯಗಳ ನಡುವೆ ಉಂಟಾದ ಸಂಘರ್ಷದ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ನೆರವು ನೀಡುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ.

banner

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಎರಡು ಸಮುದಾಯಗಳ ಅರ್ಹ ಕುಟುಂಬಗಳನ್ನು ಗುರುತಿಸಿ ಅವರಿಗೆ ಅಗತ್ಯ ಸಹಾಯವನ್ನು ಒದಗಿಸಲಾಗುತ್ತಿದೆ. ಗ್ರಾಮಸ್ಥರು ಹಳೆಯ ಘಟನೆಗಳನ್ನು ಮರೆತು ಪರಸ್ಪರ ಸಹಕಾರದಿಂದ ಶಾಂತಿ ಮತ್ತು ಸೌಹಾರ್ದತೆಯ ಜೀವನ ನಡೆಸಬೇಕು,” ಎಂದು ಕರೆ ನೀಡಿದರು.

ಈ ವೇಳೆ ಮುಂಡರಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಉದಯಕುಮಾರ್ ಯಲಿವಾಳ ಅವರು ಮಾತನಾಡಿ, “ಇಂದು ಗ್ರಾಮದ ಎರಡೂ ಸಮುದಾಯಗಳ ಸುಮಾರು 175ಕ್ಕೂ ಹೆಚ್ಚು ಕುಟುಂಬಗಳಿಗೆ ದಿನನಿತ್ಯದ ಅವಶ್ಯಕ ವಸ್ತುಗಳನ್ನು ಒಳಗೊಂಡ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ. ಸಂಕಷ್ಟದಲ್ಲಿರುವ ಸಂತ್ರಸ್ತ ಕುಟುಂಬಗಳೊಂದಿಗೆ ಇಲಾಖೆ ಸದಾ ಇರುತ್ತದೆ,” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಿತು.

ಗ್ರಾಮದಲ್ಲಿ ಇತ್ತೀಚೆಗೆ ನಡೆದ ಘಟನೆಯ ಬಳಿಕ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಶಾಂತಿ ಸ್ಥಾಪನೆಗೆ ಕ್ರಮಗಳನ್ನು ಕೈಗೊಂಡಿದ್ದು, ಇಂತಹ ಸಹಾಯಕ ಕಾರ್ಯಚಟುವಟಿಕೆಗಳು ಗ್ರಾಮಸ್ಥರಲ್ಲಿ ವಿಶ್ವಾಸ ಮೂಡಿಸುವಲ್ಲಿ ಸಹಕಾರಿಯಾಗಿವೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb